ADVERTISEMENT

ವಿಧಾನ ಪರಿಷತ್‌ ಸದಸ್ಯ ಪ್ರಾಣೇಶ್‌ಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 12:56 IST
Last Updated 6 ಜುಲೈ 2020, 12:56 IST
   

ಚಿಕ್ಕಮಗಳೂರು: ವಿಧಾನ ಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್‌ ಮತ್ತು ಅವರ ಪತ್ನಿಗೆ ಕೋವಿಡ್–19 ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ.

ಸೋಂಕಿತ ದಂಪತಿಯನ್ನು ಭಾನುವಾರ ರಾತ್ರಿಯೇ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದ್ದು, ಐದು ದಿನಗಳ ಟ್ರಾವೆಲ್‌ ಹಿಸ್ಟರಿ ಕಲೆಹಾಕಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೋಂಕು ದೃಢಪಟ್ಟಿರುವ ಬಗ್ಗೆ ಎಂ.ಕೆ.ಪ್ರಾಣೇಶ್‌ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ADVERTISEMENT

ಇದೇ 1ರಂದು ಕಂದಾಯ ಸಚಿವ ಆರ್.ಅಶೋಕ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದರು. ಅವರೊಟ್ಟಿಗೆ ಪ್ರಾಣೇಶ್ ಕೂಡ ಪಾಲ್ಗೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಪತ್ರಕರ್ತರು ಕೂಡ ಜತೆಯಾಗಿದ್ದರು. ಅವರೆಲ್ಲರೂ ಈಗ ಆತಂಕದಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.