ರಾಮನಗರ: ' ನಾನು ಜೆಡಿಎಸ್ ಬಿಡಲು ತೀರ್ಮಾನಿಸಿದ್ದು, ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಪ್ರಕಟ ಮಾಡುತ್ತೇನೆ' ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.
ನಗರದಲ್ಲಿ ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಜೆಡಿಎಸ್ ನ ಬಹುತೇಕ ಪರಿಷತ್ ಸದಸ್ಯರು ಇದೇ ತೀರ್ಮಾನಕ್ಕೆ ಬಂದಿದ್ದಾರೆ. ಬಸವರಾಜ ಹೊರಟ್ಟಿ ಅವರೂ ಈ ಬಗ್ಗೆ ಮಾತನಾಡಿದ್ದು, ಚರ್ಚೆ ಮಾಡೋಣ ಎಂದಿದ್ದಾರೆ. ಆದರೆ ಈಗಲೇ ನಾನು ಎಲ್ಲವನ್ನು ಹೇಳಲು ಆಗದು. ಮುಂದಿನ ದಿನಗಳಲ್ಲಿ ಎಲ್ಲವನ್ನು ಸ್ಪಷ್ಟಪಡಿಸುತ್ತೇನೆ' ಎಂದರು.
ನಿಮಗೆ ಆಗಿರುವ ನೋವನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ' ಕೆಲವರಿಗೆ ಯಾರಿಗೆ ನೋವಾದ್ರೂ, ಯಾರು ಸತ್ತರೂ ಏನು ಅನಿಸಲ್ಲ' ಎಂದು ಪರೋಕ್ಷವಾಗಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.