ಬಸವಕಲ್ಯಾಣ (ಬೀದರ್ ಜಿಲ್ಲೆ): ಇಲ್ಲಿಯ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ನೀಡುವ ಡಾ.ಎಂ.ಎಂ.ಕಲಬುರ್ಗಿ ಸಂಶೋಧನಾ ಪ್ರಶಸ್ತಿಗೆ ಕಲಬುರ್ಗಿಯ ಡಾ.ವೀರಣ್ಣ ದಂಡೆ ಹಾಗೂ ಡಾ.ಜಯಶ್ರೀ ದಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಶ್ವಸ್ಥ ಮಂಡಳಿ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.
ಪ್ರಶಸ್ತಿಯು ₹50 ಸಾವಿರ ನಗದು, ಫಲಕ ಒಳಗೊಂಡಿದೆ. ನವೆಂಬರ್ 23 ಹಾಗೂ 24 ರಂದು ಇಲ್ಲಿ ನಡೆಯುವ 40 ನೇ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.