
ಬೆಂಗಳೂರು: ಮೊಬೈಲ್ ಗೀಳಿನಿಂದ ಮಕ್ಕಳನ್ನು ಹೊರತರಲು ಶಾಲಾ ಶಿಕ್ಷಣ ಇಲಾಖೆ ‘ಮೊಬೈಲ್ ಬಿಡಿ–ಪುಸ್ತಕ ಹಿಡಿ’ ಅಭಿಯಾನ ಆರಂಭಿಸಿದೆ.
ಮೊಬೈಲ್‌ನ ಅತಿಯಾದ ಬಳಕೆ ಓದು ಹಾಗೂ ಕ್ರೀಡೆ ಸೇರಿದಂತೆ ದೈಹಿಕ ಚಟುವಟಿಕೆಗಳ ಮೇಲಿನ ಆಸಕ್ತಿಯನ್ನು ಕುಗ್ಗಿಸುತ್ತದೆ. ವಿದ್ಯಾರ್ಥಿಗಳನ್ನು ಮೊಬೈಲ್ ಗೀಳಿನಿಂದ ಹೊರಲು ಸೂಕ್ತ ವಾತಾವರಣ ಕಲ್ಪಿಸುವ ಜವಾಬ್ದಾರಿಯನ್ನು ಆಯಾ ಶಾಲೆಗಳ ಶಿಕ್ಷಕರು, ಪೋಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳಿಗೆ (ಎಸ್‌ಡಿಎಂಸಿ) ನೀಡಲಾಗಿದೆ. ಅಗತ್ಯವಿದ್ದರೆ ಮನೋವೈದ್ಯರು ಸೇರಿದಂತೆ ತಜ್ಞರ ಸಹಾಯ ಪಡೆಯಲು ಸೂಚಿಸಲಾಗಿದೆ.
ಸೈಬರ್ ಅಪರಾಧ, ಆನ್‌ಲೈನ್ ವಂಚನೆ, ಡಿಜಿಟಲ್ ಅರೆಸ್ಟ್ ಹಾಗೂ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ನೈಜ ಘಟನೆಗಳನ್ನು ಹಂಚಿಕೊಂಡಾಗ ಮಕ್ಕಳು ವಾಸ್ತವ ಸ್ಥಿತಿ ಅರ್ಥಮಾಡಿಕೊಳ್ಳುತ್ತಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗೃಹ ಇಲಾಖೆಗಳ ಸಹಯೋಗದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.