
ಪ್ರಜಾವಾಣಿ ವಾರ್ತೆ
ಬೆಂಗಳೂರು: ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಕರ್ನಾಟಕಕ್ಕೆ ಎಲ್ಲ ರೀತಿಯ ನೆರವನ್ನೂ ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗಿರುವ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದೇನೆ. ಪ್ರವಾಹಕ್ಕೆ ಸಿಲುಕಿರುವ ಕರ್ನಾಟಕದ ಸಹೋದರಿಯರು ಮತ್ತು ಸಹೋದರರೊಂದಿಗೆ ನಾವು ಒಟ್ಟಾಗಿ ನಿಲ್ಲುತ್ತೇವೆ. ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವನ್ನೂ ಒದಗಿಸಲಾಗುವುದು,’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.