ADVERTISEMENT

ಮೊಮ್ಮಗಳ ಸಾವು: ಬಿಎಸ್‌ವೈಗೆ ಕರೆ ಮಾಡಿ ಸಾಂತ್ವನ ಹೇಳಿದ ಪ್ರಧಾನಿ ಮೋದಿ

ಐಎಎನ್ಎಸ್
Published 28 ಜನವರಿ 2022, 13:14 IST
Last Updated 28 ಜನವರಿ 2022, 13:14 IST
   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ (30) ಅವರ ಮೃತದೇಹ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ, ಬೆಂಗಳೂರಿನ ಅವರ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಯಡಿಯೂರಪ್ಪ ಅವರಿಗೆ ಕರೆ ಮಾಡಿದ್ದಾರೆ.

ADVERTISEMENT

‘ಬಿಎಸ್‌ವೈ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಸಾಂತ್ವನ ಹೇಳಿದರು. ಈ ನೋವಿನ ಸಂದರ್ಭದಲ್ಲಿ ಎದೆಗುಂದದಂತೆ ಸಲಹೆ ನೀಡಿದರು’ ಎಂದು ಕುಟುಂಬದ ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.