ADVERTISEMENT

ಹುಬ್ಬಳ್ಳಿ: ವಿಮಾನ ನಿಲ್ದಾಣದಲ್ಲಿ ಮೋದಿಗೆ ಸಿಎಂ ಬೊಮ್ಮಾಯಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2023, 11:10 IST
Last Updated 12 ಮಾರ್ಚ್ 2023, 11:10 IST
   

ಹುಬ್ಬಳ್ಳಿ: ಧಾರವಾಡದ ಚಿಕ್ಕಮಲ್ಲಿಗವಾಡದಲ್ಲಿರುವ ರಾಜ್ಯದ ಮೊದಲ ಐಐಟಿ (ಭಾರತೀಯ ತಂತ್ರಜ್ಞಾನ ಸಂಸ್ಥೆ) ಉದ್ಘಾಟನೆ ಸಲುವಾಗಿ, ಭಾನುವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.

ವಿಶೇಷ ವಿಮಾನದಲ್ಲಿ ಮಧ್ಯಾಹ್ನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ ಹಾಗೂ ಹು–ಧಾ ಪೊಲೀಸ್ ಕಮಿಷನರ್ ರಮನ್ ಗುಪ್ತಾ ಇದ್ದರು.

ನಂತರ ಸೇನಾ ಹೆಲಿಕಾಪ್ಟರ್‌ನಲ್ಲಿ ಮುಖ್ಯಮಂತ್ರಿಯೊಂದಿಗೆ ಚಿಕ್ಕಮಲ್ಲಿಗವಾಡಕ್ಕೆ ತೆರಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.