ಬಳ್ಳಾರಿ:‘ಕುರುಗೋಡಿನಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಪ್ರಚಾರ ಸಭೆಗೆ ಜನರನ್ನು ಕರೆತರಲು ಹಣ ಹಂಚಿದ ವಿಡಿಯೊ ನಮ್ಮ ಬಳಿ ಇದೆ. ದಾಖಲೆ ಸಮೇತ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಿದ್ದೇವೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ತಿಳಿಸಿದರು.
‘ಚುನಾವಣೆಯಲ್ಲಿ ₹500ರ ನೋಟುಗಳು ರಾರಾಜಿಸುತ್ತಿವೆ. ಕಾಂಗ್ರೆಸ್ ಮುಖಂಡರು ಸಮ್ಮಿಶ್ರ ಸರ್ಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಪೊಲೀಸರು ಸೇರಿದಂತೆ ಯಾರೂ ಕ್ರಮ ತೆಗೆದುಕೊಳ್ಳುತ್ತಿಲ್ಲ’ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು. ಹಣ ಹಂಚಿಕೆಯ ದೃಶ್ಯಾವಳಿಗಳನ್ನು ಅವರು ಪ್ರದರ್ಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.