ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನೂ ಸೈಬರ್ ವಂಚಕರು ಬಿಟ್ಟಿಲ್ಲ. ಟ್ರಂಪ್ ಹೆಸರಿನಲ್ಲಿ ರಾಜ್ಯದ 150ಕ್ಕೂ ಹೆಚ್ಚು ಜನರಿಂದ ಕೋಟಿಗೂ ಅಧಿಕ ಹಣವನ್ನು ಸಂಗ್ರಹಿಸಿ ವಂಚಿಸಲಾಗಿದ್ದು, ಹಣ ವಾಪಸ್ ಕೊಡಿಸುವಂತೆ ಸಂತ್ರಸ್ತರು ಠಾಣೆಗಳ ಮೆಟ್ಟಿಲೇರುತ್ತಿದ್ದಾರೆ. ಟ್ರಂಪ್ ಹೆಸರಿನಲ್ಲಿ ‘ಮೊಬೈಲ್ ಆ್ಯಪ್’ವೊಂದನ್ನು ಅಭಿವೃದ್ಧಿಪಡಿಸಿರುವ ಸೈಬರ್ ವಂಚಕರು, ವಿವಿಧ ಕಂಪನಿ ಸೇವೆಗಳ ಬಗ್ಗೆ ವಿಮರ್ಶೆ ಹಾಗೂ ಹೂಡಿಕೆ ಹೆಸರಿನಲ್ಲಿ ಜನರಿಂದ ಕೋಟಿಗೂ ಅಧಿಕ ಹಣ ಪಡೆದು ವಂಚಿಸಿರುವುದು ಪತ್ತೆಯಾಗಿದೆ. ಹಾವೇರಿ, ಮಂಗಳೂರು, ತುಮಕೂರು, ಹುಬ್ಬಳ್ಳಿ–ಧಾರವಾಡ, ಕಲಬುರ್ಗಿ, ಮೈಸೂರು, ಬಳ್ಳಾರಿ, ಬೀದರ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳ ಠಾಣೆಗಳಲ್ಲಿ ವಂಚನೆಗೆ ಸಂಬಂಧಪಟ್ಟಂತೆ ಪ್ರಕರಣಗಳು ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.