ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆ ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜನವರಿ 23ಕ್ಕೆ ಮುಂದೂಡಿದೆ.
ಈಗಾಗಲೇ ಪಟ್ಟಿ ಮಾಡಲಾದ ಪ್ರಕರಣಗಳು ಸಾಕಷ್ಟು ಇರುವುದರಿಂದ ಈ ಪ್ರಕರಣದ ವಿಚಾರಣೆಯನ್ನು ಇಂದು ನಡೆಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ನ್ಯಾಯಮೂರ್ತಿಗಳಾದ ಪ್ರತಿಭಾ ಎಂ.ಸಿಂಗ್ ಹಾಗೂ ಅಮಿತ್ ಶರ್ಮಾ ಅವರಿದ್ದ ಪೀಠವು ವಿಚಾರಣೆ ಮುಂದೂಡಿದೆ.
ಜಾರಿ ನಿರ್ದೇಶನಾಲಯವು 2020ರಲ್ಲಿ ಹೂಡಿರುವ ಪ್ರಕರಣಗಳನ್ನು ಹಾಗೂ ಸಮನ್ಸ್‌ಗಳನ್ನು ರದ್ದುಗೊಳಿಸಬೇಕು ಎಂದು ಕೋರಿ ಶಿವಕುಮಾರ್ ಅವರು 2020ರಲ್ಲಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ಮಹತ್ವದ ಕಾನೂನು ಸಮಸ್ಯೆಗಳಿದ್ದು, ವಾದ ಮಂಡಿಸಲು ಅರ್ಧ ದಿನ ನೀಡಬೇಕು ಎಂದು ಶಿವಕುಮಾರ್ ಪರ ವಕೀಲರು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.