ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ.‌ಶಿವಕುಮಾರ್‌ಗೆ ಸಮನ್ಸ್ ಜಾರಿ

​ಪ್ರಜಾವಾಣಿ ವಾರ್ತೆ
Published 31 ಮೇ 2022, 11:04 IST
Last Updated 31 ಮೇ 2022, 11:04 IST
ಡಿ.ಕೆ.‌ಶಿವಕುಮಾರ್‌
ಡಿ.ಕೆ.‌ಶಿವಕುಮಾರ್‌   

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳಿಗೆ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು,ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಜಾರಿ ನಿರ್ದೇಶನಾಲಯ (ಇ.ಡಿ) ದಿಂದ ದಾಖಲಾಗಿರುವಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.

ಜುಲೈ 1ರಂದು ಪ್ರಕರಣದ‌ ವಿಚಾರಣೆಯನ್ನು ನಿಗದಿಪಡಿಸಿ ಆದೇಶ ಹೊರಡಿಸಿರುವ ನ್ಯಾಯಾಧೀಶ ವಿಕಾಸ್ ಧುಲ್ ನೇತೃತ್ವದ ಏಕ ಸದಸ್ಯ ಪೀಠವು, ವಿಚಾರಣೆಗೆ ಹಾಜರಾಗಬೇಕು ಎಂದು ಹೇಳಿದೆ.

ADVERTISEMENT

ಡಿ.ಕೆ. ಶಿವಕುಮಾರ್ ಹಾಗೂ ಪ್ರಕರಣದ ಇತರ ಆರೋಪಿಗಳಾದ ಸಚಿನ್ ನಾರಾಯಣ್, ಸುನೀಲ್ ಕುಮಾರ್ ಶರ್ಮಾ, ರಾಜೇಂದ್ರ ಹಾಗೂ ದೆಹಲಿ ಕರ್ನಾಟಕ ಭವನದ ನೌಕರ ಆಂಜನೇಯ ಹನುಮಂತಯ್ಯ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಕಳೆದ ವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಕಳೆದ ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ್ದ ಪೀಠವು, ಆರ್ಥಿಕ ಅಪರಾಧಗಳ ಪಿತೂರಿ ಆರೋಪದಡಿ ಐಪಿಸಿ ಸೆಕ್ಷನ್ 120 'ಬಿ' ಅಡಿ ದಾಖಲಾಗಿರುವ ಪ್ರಕರಣದ ವಿಚಾರಣೆಯು ನ್ಯಾಯಾಲಯದ ವ್ಯಾಪ್ತಿಗೆ‌ ಬರಲಿದೆಯೇ ಎಂಬ ಕುರಿತು ಪರಿಶೀಲನೆ‌ ನಡೆಸುವುದಾಗಿ ತಿಳಿಸಿತ್ತು.

ಇ.ಡಿ. ಪರ ವಕೀಲರ ವಾದವನ್ನು ಪರಿಗಣಿಸಿರುವ ಪೀಠವು, ಬೇಸಿಗೆ ರಜೆಯ ಬಳಿಕ ವಿಚಾರಣೆ ನಡೆಸಲು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.