ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸೋಮವಾರ ಹಾಜರಾದರು.
ಶಿವಕುಮಾರ್ ಅವರಿಗೆ ಕಳೆದ ವಾರ ಇ.ಡಿ. ಅಧಿಕಾರಿಗಳು ಸಮನ್ಸ್ ನೀಡಿ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.
ಸೋಮವಾರ 11 ಗಂಟೆ ಸುಮಾರಿಗೆಇ.ಡಿ. ಕಚೇರಿಗೆ ಡಿ.ಕೆ.ಶಿವಕುಮಾರ್ ತಲುಪಿದರು.
ಯಾವ ವಿಷಯಕ್ಕೆ ಸಂಬಂಧಿಸಿ ಸಮನ್ಸ್ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ವಿಚಾರಣೆ ಮುಗಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.