ADVERTISEMENT

ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಹಣ: ಸಚಿವ ನಾರಾಯಣ ಗೌಡ

ಲಾಕ್‌ಡೌನ್‌ ವೇಳೆ ಹೂವು, ಹಣ್ಣು, ತರಕಾರಿ ನಾಶ

​ಪ್ರಜಾವಾಣಿ ವಾರ್ತೆ
Published 28 ಮೇ 2020, 20:31 IST
Last Updated 28 ಮೇ 2020, 20:31 IST
ನಾರಾಯಣ ಗೌಡ
ನಾರಾಯಣ ಗೌಡ   

ಬೆಂಗಳೂರು: ‘ಲಾಕ್‌ಡೌನ್ ಅವಧಿಯಲ್ಲಿ ನಷ್ಟಕ್ಕೆ ಒಳಗಾದ ಹೂವು, ಹಣ್ಣು, ತರಕಾರಿ ಬೆಳೆಗಾರರ ಮಾಹಿತಿಯನ್ನು ಕಲೆಹಾಕಲಾಗಿದೆ. ಸಂಪೂರ್ಣ ವಿವರ ಸಿದ್ದಪಡಿಸಿ ರೈತರ ಖಾತೆಗೆ ಕೆಲವೇ ದಿನಗಳಲ್ಲಿ ಹಣ ವರ್ಗಾಯಿಸುತ್ತೇವೆ’ ಎಂದು ತೋಟಗಾರಿಕೆ ಸಚಿವ ನಾರಾಯಣ ಗೌಡ ತಿಳಿಸಿದರು.

‘ಲಾಕ್‌ಡೌನ್‌ನಿಂದಾಗಿ ಹೂವಿನ ಬೆಳೆಗಾರರಿಗೆ ದೊಡ್ಡ ಪ್ರಮಾಣದಲ್ಲಿ ನಷ್ಟ ಆಗಿದೆ. ಹೂವಿಗೆ ಯಾವುದೇ ರೀತಿಯಲ್ಲಿ ಮಾರುಕಟ್ಟೆ ಒದಗಿಸುವ ಅವಕಾಶ ಇರಲಿಲ್ಲ. ಒಟ್ಟು 12.735 ಹೆಕ್ಟೇರ್ ಪ್ರದೇಶದಲ್ಲಿ ಹೂವು ಬೆಳೆಯಲಾಗಿದೆ. ಪರಿಹಾರವಾಗಿ ಪ್ರತಿ ಹೆಕ್ಟೇರ್‌ಗೆ ತಲಾ ₹ 25 ಸಾವಿರ ನೀಡಲು ₹ 31.83 ಕೋಟಿ ತೆಗೆದಿರಿಸಲಾಗಿದೆ’ ಎಂದು ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘50,083 ಹೆಕ್ಟೇರ್‌ನಲ್ಲಿ ತರಕಾರಿ, 41,054 ಹೆಕ್ಟೇರ್‌ನಲ್ಲಿ ಹಣ್ಣು ಬಳೆಯಲಾಗಿದೆ. ಪ್ರತಿ ಹೆಕ್ಟೇರ್‌ಗೆ ₹ 15 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಸರ್ಕಾರ ₹ 137 ಕೋಟಿ ತೆಗೆದಿರಿಸಿದೆ. ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಬೆಳೆ ನಷ್ಟ ಆಗಿರುವ ಯಾವುದೇ ರೈತನ ಹೆಸರು ಪಟ್ಟಿಯಿಂದ ಕೈ ತಪ್ಪಿದ್ದಲ್ಲಿ, ಪಟ್ಟಿಗೆ ಸೇರಿಸಲು ಅವಕಾಶ ಇದೆ. ಸಂಪೂರ್ಣ ಮಾಹಿತಿ ಕಲೆ ಹಾಕಿ, ಅತಿ ಶೀಘ್ರದಲ್ಲಿ ಹಣವನ್ನು ನೇರವಾಗಿ ರೈತರ ಖಾತೆಗೆ ಹಾಕುತ್ತೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.