ADVERTISEMENT

Photos | ರಾಜ್ಯದ ವಿವಿದೆಢೆ ಮಳೆ, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದೆ. ಕೆಲವೆಡೆ ಮರಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಮೈಸೂರು, ದಾವಣಗೆರೆ, ಬೆಳಗಾವಿ, ದಕ್ಷಿಣ ಕನ್ನಡ, ಶಿವಮೊಗ್ಗ, ಹುಬ್ಬಳ್ಳಿ–ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದೆ.ಇದನ್ನೂ ಓದಿ... ಮುಂಗಾರು ತೀವ್ರ: 10 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2021, 14:11 IST
Last Updated 18 ಜೂನ್ 2021, 14:11 IST
ಹುಬ್ಬಳ್ಳಿಯ ಗುಜಾರತ್‌ ಭವನದ ಬಳಿ ಸುರಿದ ಮಳೆಯಲ್ಲಿ ವಾಹನಗಳು ಸಾಗಿದವು ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌
ಹುಬ್ಬಳ್ಳಿಯ ಗುಜಾರತ್‌ ಭವನದ ಬಳಿ ಸುರಿದ ಮಳೆಯಲ್ಲಿ ವಾಹನಗಳು ಸಾಗಿದವು ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌   
ಹುಬ್ಬಳ್ಳಿಯ ಬೈಲಪ್ಪನವರ ನಗರದಲ್ಲಿ ಗುರುವಾರ ಸುರಿದ ಮಳೆ ಕಂಡುಬಂದ ದೃಶ್ಯ – ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿಗೆ ಸಮೀಪದಲ್ಲಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳ ಸಂಗಮ ಸ್ಥಾನದಲ್ಲಿರುವ ಸುಕ್ಷೇತ್ರ ನರಸಿಂಹವಾಡಿಯ ದತ್ತ ಮಂದಿರ ಜಲಾವೃತಗೊಂಡಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿಗೆ ಸಮೀಪದಲ್ಲಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳ ಸಂಗಮ ಸ್ಥಾನದಲ್ಲಿರುವ ಸುಕ್ಷೇತ್ರ ನರಸಿಂಹವಾಡಿಯ ದತ್ತ ಮಂದಿರ ಜಲಾವೃತಗೊಂಡಿದೆ.
ಹುಬ್ಬಳ್ಳಿಯ ಅಕ್ಷಯ ಪಾರ್ಕ್‌ನಲ್ಲಿ ಹದಗೆಟ್ಟಿರುವ ರಸ್ತೆ ಖಂಡಿಸಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮಳೆ ನೀರಿನಿಂದ ಜಲಾವೃತಗೊಂಡ ರಸ್ತೆಯಲ್ಲಿ ಶುಕ್ರವಾರ ಪ್ರಧಾನಿ ಮೋದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಕಟೌಟ್‌ಗಳನ್ನು ನಿಲ್ಲಿಸಿ ವಿಭಿನ್ನವಾಗಿ ಪ್ರತಿಭಟಿಸಿದರು – ಪ್ರಜಾವಾಣಿ ಚಿತ್ರ
ಮೈಸೂರಿನಲ್ಲಿ ಶುಕ್ರವಾರ ಸುರಿದ ಮಳೆಯಲ್ಲಿ ವಾಹನಗಳು ಸಾಗುತ್ತಿರುವ ದೃಶ್ಯ ಜೆ.ಎಲ್.ಬಿ ರಸ್ತೆಯಲ್ಲಿ ಕಂಡು ಬಂತು.
ಧಾರವಾಡದಲ್ಲಿ ಶುಕ್ರವಾರ ಮಳೆ ಸುರಿದ ಸಂದರ್ಭದಲ್ಲಿ ವಾಹನ ಸವಾರರೊಬ್ಬರು ಸಾಗಿದ ದೃಶ್ಯ
ಮಳೆ, ಗಾಳಿಯ ಪರಿಣಾಮ ಶಿರಸಿ ತಾಲ್ಲೂಕಿನ ಸೊಣಗಿನಮನೆಯ ಪಾರ್ವತಿ ಗೌಡ ಎಂಬುವವರ ಮನೆ ಮೇಲೆ ಮರ ಬಿದ್ದು ಚಾವಣಿ ಮುರಿದು ಬಿದ್ದಿವೆ.
ದಾವಣಗೆರೆ ಜಿಲ್ಲೆಯಾದ್ಯಂತ ಹದ ಮಳೆಯಾಗಿರುವುದರಿಂದ ಹರಿಹರದ ತುಂಗಭದ್ರ ಸೇತುವೆಯ ಬಳಿ ನದಿಗೆ ಹೆಚ್ಚಿನ ನೀರಿನ ಹರಿವು ಬಂದಿದ್ದರಿಂದ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಮನೋಹರ ದೃಶ್ಯ –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ಹುಬ್ಬಳ್ಳಿಯ ಶಿರೂರು ಪಾರ್ಕ್ ಬಳಿ ಜಿಟಿ ಜಿಟಿ ಮಳೆಯಲ್ಲೇ ಸಾಗುತ್ತಿರುವ ಜನರು ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.