ADVERTISEMENT

ವಿವಿಧೆಡೆ ಗುಡುಗು ಸಹಿತ, ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 22:32 IST
Last Updated 6 ಜುಲೈ 2021, 22:32 IST
ಕಲಬುರ್ಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ಮಂಗಳವಾರ ಸುರಿದ ಮಳೆಯಲ್ಲೇ ಸೈಕಲ್ ಸವಾರ ಮುಂದೆ ಸಾಗಿದ ನೋಟ ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌
ಕಲಬುರ್ಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಬಳಿ ಮಂಗಳವಾರ ಸುರಿದ ಮಳೆಯಲ್ಲೇ ಸೈಕಲ್ ಸವಾರ ಮುಂದೆ ಸಾಗಿದ ನೋಟ ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌   

ಕಲಬುರ್ಗಿ/ಹುಬ್ಬಳ್ಳಿ/ಮೈಸೂರು: ಕಲ್ಯಾಣ ಕರ್ನಾಟಕದ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಹಲವೆಡೆ ಮಂಗಳವಾರ ಬಿರುಸಿನ ಮಳೆ ಸುರಿಯಿತು. ಕಲಬುರ್ಗಿ ನಗರದಲ್ಲಿ ಗುಡುಗು, ಸಿಡಿಲಿನ ಆರ್ಭಟ ಜೋರಾಗಿತ್ತು.

ಬೀದರ್‌ ತಾಲ್ಲೂಕಿನಲ್ಲಿ ಒಂದು ಗಂಟೆ ಧಾರಾಕಾರ, ಹುಲಸೂರಿನಲ್ಲಿ ಸಾಧಾರಣ ಮಳೆಯಾಗಿದೆ. ಯಾದಗಿರಿ ತಾಲ್ಲೂಕಿನ ಸೈದಾಪುರ ಗ್ರಾಮ, ವಡಗೇರಾ ತಾಲ್ಲೂಕಿನಲ್ಲಿ ಧಾರಾಕಾರ ಮಳೆಯಾಯಿತು.

ಮೈಸೂರು ನಗರ ಹಾಗೂ ಜಿಲ್ಲೆಯ ನಂಜನಗೂಡು ಹಾಗೂ ತಿ.ನರಸೀಪುರ ತಾಲ್ಲೂಕುಗಳಲ್ಲಿ ಸೋಮವಾರ ತಡರಾತ್ರಿ ಗುಡುಗು, ಸಿಡಿಲು ಸಮೇತ ಧಾರಾಕಾರ ಮಳೆಯಾಗಿದೆ. ರಾತ್ರಿ 12.30ರಿಂದ ನಸುಕಿನವರೆಗೂ ಸುರಿಯಿತು.

ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಕುಳಗೇರಿ ಹೋಬಳಿಯ ಸುತ್ತಮುತ್ತ ಭಾರಿ ಮಳೆಗೆ ಕೃಷಿ ಭೂಮಿಯಲ್ಲಿನ ಒಡ್ಡುಗಳು ಕಿತ್ತುಹೋಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.