ADVERTISEMENT

ಕರಾವಳಿಯಲ್ಲಿ ಮುಂಗಾರು ಚುರುಕು: ದಕ್ಷಿಣ ಕನ್ನಡ, ಉಡುಪಿಯ ಕೆಲವೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2022, 19:45 IST
Last Updated 10 ಜೂನ್ 2022, 19:45 IST
ಮಂಗಳೂರಿನಲ್ಲಿ ಶುಕ್ರವಾರ ಸಂಜೆ ಮಳೆ ಸುರಿಯುತ್ತಿದ್ದಾಗ ಮಹಿಳೆಯೊಬ್ಬರು ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ದೃಶ್ಯ –ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌
ಮಂಗಳೂರಿನಲ್ಲಿ ಶುಕ್ರವಾರ ಸಂಜೆ ಮಳೆ ಸುರಿಯುತ್ತಿದ್ದಾಗ ಮಹಿಳೆಯೊಬ್ಬರು ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ದೃಶ್ಯ –ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌   

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಮಳೆ ಸುರಿಯಿತು.

ಮಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿತ್ತು. 3 ಗಂಟೆಯ ನಂತರ ಮಳೆ ಆರಂಭವಾಗಿದೆ. ರಾತ್ರಿ ಮಂಗಳೂರು ನಗರ, ಪುತ್ತೂರು ಬಂಟ್ವಾಳ ಸುಳ್ಯ ಮುಂತಾದ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಉಡುಪಿ ಜಿಲ್ಲೆಯ ಹಲವೆಡೆ ಮುಂಜಾನೆಯಿಂದಲೇ ಬಿಟ್ಟು ಬಿಟ್ಟು ಮಳೆಯಾಗುತ್ತಿತ್ತು. ರಾತ್ರಿ ವೇಳೆಗೆ ಮಳೆ ಚುರುಕಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಎನ್‌.ಆರ್‌.ಪುರ, ಬಾಳೆಹೊನ್ನೂರು, ಶೃಂಗೇರಿ ಭಾಗದಲ್ಲಿ ತುಂತುರು ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.