ADVERTISEMENT

ರಾಜ್ಯದ 24 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 21:03 IST
Last Updated 5 ಜುಲೈ 2021, 21:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನಲ್ಲಿ ಜುಲೈ 6ರಿಂದ 8ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದಜು.10ರವರೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಯಾದಗಿರಿ, ವಿಜಯಪುರ, ಕಲಬುರ್ಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಜು.7ರವರೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಿರುವುದಾಗಿ ಇಲಾಖೆ ತಿಳಿಸಿದೆ.

ADVERTISEMENT

ಮಳೆ–ಎಲ್ಲಿ, ಎಷ್ಟು?: ಮಂಡ್ಯ ಜಿಲ್ಲೆಯ ಹೊನಕೆರೆ ಭಾಗದಲ್ಲಿ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಳ್ಳೇಗಾಲ 8,
ಪಾವಗಡ, ಆನೇಕಲ್ 7, ತೊಂಡೇಬಾವಿ 6, ಚಿಕ್ಕಬಳ್ಳಾಪುರ, ನೆಲಮಂಗಲ 5, ಶ್ರೀರಂಗಪಟ್ಟಣ, ಕುಣಿಗಲ್‌ನಲ್ಲಿ 4 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.