ADVERTISEMENT

ರಾಜ್ಯದ 14 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2021, 20:01 IST
Last Updated 6 ಜುಲೈ 2021, 20:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಮಾರುತಗಳು ಚುರುಕಾಗಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿಜುಲೈ 7 ಮತ್ತು 8 ರಂದು ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜು.8 ರವರೆಗೆ ‘ಯೆಲ್ಲೊ ಅಲರ್ಟ್‌’ ಮುಂದುವರಿಸಲಾಗಿದೆ’.

‘ಕರಾವಳಿ ಜಿಲ್ಲೆಗಳಲ್ಲಿ ಇದೇ 7 ರವರೆಗೆ ಮಳೆ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು’ ಎಂದು ಮಾಹಿತಿ ನೀಡಿದೆ.

ADVERTISEMENT

ಮಳೆ–ಎಲ್ಲಿ, ಎಷ್ಟು?: ಕಾರವಾರದಲ್ಲಿ 12 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮಳವಳ್ಳಿ 8, ಭಟ್ಕಳ 5, ಪಾಂಡವಪುರ, ನಂಜನಗೂಡು, ಮೈಸೂರು 3, ಚಿಂಚೋಳಿ, ಹುನಗುಂದ, ಶ್ರೀರಂಗಪಟ್ಟಣ, ಕನಕಪುರ, ದಾವಣಗೆರೆ 2, ಕುಂದಾಪುರ, ಕಲಬುರ್ಗಿ, ರಾಯಚೂರು, ರಾಮನಗರ, ಚಾಮರಾಜನಗರದಲ್ಲಿ ತಲಾ 1 ಸೆಂ.ಮೀ ಮಳೆ ಸುರಿದಿದೆ. ಕಲಬುರ್ಗಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರು ಹಾಗೂ ಚಿಕ್ಕಮಗಳೂರಿನಲ್ಲಿ ತಲಾ 18 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.