ADVERTISEMENT

ಜುಲೈ12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 28 ಜೂನ್ 2019, 13:22 IST
Last Updated 28 ಜೂನ್ 2019, 13:22 IST
   

ಬೆಂಗಳೂರು: ಜುಲೈ 12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ.

ಎಸ್‌ಟಿ ಮೀಸಲಾತಿ ಸಂಬಂಧ ಸಮಿತಿ ರಚನೆ ಮಾಡಬಹುದೆ ಅಥವಾಆಯೋಗ ರಚಿಸಬಹುದೇ ಎಂಬ ಬಗ್ಗೆ ಮಾಹಿತಿ ನೀಡುವಂತೆಮುಖ್ಯ ಕಾರ್ಯದರ್ಶಿಯವರಿಗೆ ಸರ್ಕಾರ ಸೂಚನೆ ನೀಡಿದೆ.

ಜುಲೈ 2ನೇ ವಾರದಲ್ಲಿಮೈಸೂರು ಹಾಗೂ ಹುಬ್ಬಳ್ಳಿಕೇಂದ್ರವಾಗಿಟ್ಟುಕೊಂಡು ಮೋಡ ಬಿತ್ತನೆ ಮಾಡಲಾಗುವುದು. ರೆಡಾರ್ ತರಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಎರಡೂ ಕೇಂದ್ರಗಳಿಂದ ಏಕ ಕಾಲದಲ್ಲಿ ಮೋಡ ಬಿತ್ತನೆ ಮಾಡಲಾಗುತ್ತದೆ.

ADVERTISEMENT

ರಾಜ್ಯದ 2.20 ಕೋಟಿ ರೈತರ ಹೊಲಗಳ ಬೆಳೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಆ್ಯಪ್ ಆಧಾರಿತ ಸಮೀಕ್ಷೆ ಇದಾಗಿದ್ದು, ₹90 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ.

ಜತೆಗೆ, ಈ ವರ್ಷ ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯನ್ನು ಮುಂದುವರಿಸಲಾಗುತ್ತದೆ. ರಾಜ್ಯದ ಪಾಲು ₹546 ಕೋಟಿ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.