ADVERTISEMENT

ವಿದ್ಯುತ್ ಮಾರಾಟದಿಂದ ₹ 2,500 ಕೋಟಿ ಆದಾಯ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 20:34 IST
Last Updated 7 ಮಾರ್ಚ್ 2022, 20:34 IST
   

ಬೆಂಗಳೂರು: ‘ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆಗಿದ್ದರಿಂದ ಅದನ್ನು ಮಾರಾಟ ಮಾಡಿ ₹ 2,500 ಕೋಟಿ ಆದಾಯ ಗಳಿಸಲಾಗಿದೆ’ ಎಂದು ಇಂಧನ ಸಚಿವ ವಿ. ಸುನೀಲ್‌ಕುಮಾರ್ ತಿಳಿಸಿದರು.

ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ಈ ತಿಂಗಳು ಅತೀ ಹೆಚ್ಚು ವಿದ್ಯುತ್ ಬೇಡಿಕೆ ಬಂದಿದ್ದು, 14,741 ಮೆಗಾ ವ್ಯಾಟ್‌ ವಿದ್ಯುತ್‌ ಬಳಕೆ ಮಾಡಲಾಗಿದೆ. ಎಲ್ಲ‌ ವಿದ್ಯುತ್ ಕೇಂದ್ರಗಳಿಂದ ಒಟ್ಟು 27,237.97 ಮೆಗಾ ವ್ಯಾಟ್ ಉತ್ಪಾದನೆಯಾಗಿದೆ’ ಎಂದರು.

ಹೈಬ್ರೀಡ್ ಪವರ್ ಪಾರ್ಕ್: ಬಿಜೆಪಿಯ ವೈ.ಎಂ. ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ ಕೊಪ್ಪಳ, ಧಾರವಾಡ, ಗದಗ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ತುಮಕೂರು ಜಿಲ್ಲೆಗಳನ್ನು ಕೇಂದ್ರವಾಗಿ ಇಟ್ಟುಕೊಂಡು ರಾಜ್ಯದಲ್ಲಿ ಐದು ಸಾವಿರ ಮೆಗಾ ವ್ಯಾಟ್ ಹೈಬ್ರೀಡ್ ಪವರ್ ಪಾರ್ಕ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಮುಂದಿನ 10 ವರ್ಷದಲ್ಲಿ 22 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಗಮನದಲ್ಲಿಟ್ಟುಕೊಂಡು ಯೋಜನೆ
ಗಳನ್ನು ರೂಪಿಸಲಾಗಿದೆ’ ಎಂದರು.

ADVERTISEMENT

ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾರ್ಜಿಂಗ್‌ ಸ್ಟೇಷನ್‌: ‘ಜಿಲ್ಲಾ ಕೇಂದ್ರ, ರಾಷ್ಟ್ರೀಯ ಹೆದ್ದಾರಿ, ಪ್ರವಾಸಿ ತಾಣಗಳಲ್ಲಿ ಚಾರ್ಜಿಂಗ್ ಸ್ಟೇಷನ್ ಮಾಡುವ ಬಗ್ಗೆ ನಿರ್ಧರಿಸಿದ್ದು, ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಜವಾಬ್ದಾರಿ ನೀಡಲಾಗಿದೆ’ ಎಂದು ಸುನೀಲ್ ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.