
ಪ್ರಜಾವಾಣಿ ವಾರ್ತೆ
ಬೆಂಗಳೂರು: ವಿಧಾನಸಭೆಯ ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ಪದಚ್ಯುತಿಗೆ ಅವಿಶ್ವಾಸ ನಿರ್ಣಯ ಮಂಡಿಸಲು ಬೆಂಬಲ ವ್ಯಕ್ತಪಡಿಸಿ ಸುಮಾರು 30ಕ್ಕೂ ಹೆಚ್ಚು ಬಿಜೆಪಿ ಶಾಸಕರು ನೋಟಿಸ್‌ಗೆ ಸಹಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಶಾಸಕ ಆನಂದ ಮಾಮನಿಯವರು ಉಪಸಭಾಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದು, ಅದಕ್ಕಾಗಿ ಪ್ರಯತ್ನ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದವರಿಗೆ ನೀಡಬೇಕು ಎಂಬ ಚಿಂತನೆಯೂ ಪಕ್ಷದ್ದಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಾಗಲೇ ಕೃಷ್ಣಾ ರೆಡ್ಡಿಯವರಿಗೆ ರಾಜೀನಾಮೆ ನೀಡಲು ಸೂಚ್ಯವಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.