ADVERTISEMENT

ದಾಖಲೆಗಳೊಂದಿಗೆ ರಾಷ್ಟ್ರಪತಿಗೆ ದೂರು: ಸಂಸದ ಡಿ.ಕೆ. ಸುರೇಶ

ಕಾಂಗ್ರೆಸ್‌ ಶಾಸಕರನ್ನು ಕೂಡಿಟ್ಟ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2019, 19:21 IST
Last Updated 7 ಫೆಬ್ರುವರಿ 2019, 19:21 IST

ನವದೆಹಲಿ: ಹಣದ ಆಮಿಷ ಒಡ್ಡಿ ಕಾಂಗ್ರೆಸ್‌ನ ಕೆಲವು ಶಾಸಕರನ್ನು ತನ್ನತ್ತ ಸೆಳೆಯುತ್ತಿರುವ ಬಿಜೆಪಿಯು ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ದಾಖಲೆಗಳ ಸಮೇತ ಈ ಕುರಿತು ರಾಷ್ಟ್ರಪತಿಯವರಿಗೆ ದೂರು ಸಲ್ಲಿಸಲಾಗುವುದು ಎಂದು ಸಂಸದ ಡಿ.ಕೆ. ಸುರೇಶ ಹೇಳಿದರು.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಅಭದ್ರಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಕಾಂಗ್ರೆಸ್‌ ಶಾಸಕರನ್ನು ಅಕ್ರಮ ಬಂಧನದಲ್ಲಿ ಇರಿಸಿವೆ. ಕೆಲವು ಗೂಂಡಾಗಳ ನೆರವಿನೊಂದಿಗೆ ಕಾಂಗ್ರೆಸ್‌ ಶಾಸಕರನ್ನು ಹಿಡಿದಿಟ್ಟುಕೊಂಡು, ಆಮಿಷ ಒಡ್ಡಿರುವ ದಾಖಲೆಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು. ‘ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿ ಜೊತೆ ಗುರುತಿಸಿಕೊಳ್ಳಬೇಕು. ಇಲ್ಲದಿದ್ದರೆ ರಾಜಕೀಯವಾಗಿ ಮುಗಿಸಲಾಗುವುದು’ ಎಂಬ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT