ADVERTISEMENT

ಸಂಸದ ಡಿ.ಕೆ. ಸುರೇಶ್‌ಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 10:35 IST
Last Updated 6 ಅಕ್ಟೋಬರ್ 2020, 10:35 IST
ಸಂಸದ ಡಿ.ಕೆ. ಸುರೇಶ್
ಸಂಸದ ಡಿ.ಕೆ. ಸುರೇಶ್   

ಬೆಂಗಳೂರು: ಸಂಸದ ಡಿ.ಕೆ. ಸುರೇಶ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ ಎಂದಿದ್ದಾರೆ.

ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.