ADVERTISEMENT

ಕೇಂದ್ರ ಸಂಪುಟದಲ್ಲಿ ಲಿಂಗಾಯತರಿಗೆ ಅನ್ಯಾಯ; ಪ್ರತಿಕ್ರಿಯೆಗೆ ಜಿಗಜಿಣಗಿ ನಕಾರ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 11:51 IST
Last Updated 3 ಜೂನ್ 2019, 11:51 IST
ರಮೇಶ ಜಿಗಜಿಣಗಿ
ರಮೇಶ ಜಿಗಜಿಣಗಿ   

ವಿಜಯಪುರ: ‘ಕೇಂದ್ರ ಸಂಪುಟದಲ್ಲಿ ಲಿಂಗಾಯತ ಸಂಸದರಿಗೆ ಅನ್ಯಾಯವಾಗಿದೆ’ ಎಂಬ ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿಕೆಗೆ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದಾಗ, ‘ಲಿಂಗಾಯತರಿಗೆ ಅನ್ಯಾಯ ಆಗಿರುವ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದನ್ನು ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ನನಗೆ ಅದರ ಬಗ್ಗೆ ಏನೂ ಕೇಳಬೇಡಿ’ ಎಂದರು.

‘ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ. ನನಗೆ ಯಾವುದೇ ಅಸಮಾಧಾನವೂ ಇಲ್ಲ, ಸಂಭ್ರಮವೂ ಇಲ್ಲ. ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.