
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸುಂದರ ಪ್ರಕಾಶನ ನೀಡುವ 2026ನೇ ಸಾಲಿನ ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ'ಗೆ ಮೃತ್ಯುಂಜಯ ದೊಡ್ಡವಾಡ ಆಯ್ಕೆಯಾಗಿದ್ದಾರೆ.
ಸುಗಮ ಸಂಗೀತ ಗಾಯಕ, ಸಂಗೀತ ನಿರ್ದೇಶಕ ಮೃತ್ಯುಂಜಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಸಮಿತಿಯ ಗೌರವ ಅಧ್ಯಕ್ಷರೂ ಆದ ಕವಿ ಬಿ.ಆರ್.ಲಕ್ಷ್ಮಣರಾವ್, ಕಾರ್ಯದರ್ಶಿ ಇಂದಿರಾ ಸುಂದರ್ ತಿಳಿಸಿದ್ದಾರೆ. ಪ್ರಶಸ್ತಿಯು ₹10,000 ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಮಾರ್ಚ್ 15ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.