ADVERTISEMENT

ಮೇ 30ರಿಂದ ಎಂಎಸ್‌ಎಂಇ ಸಮಾವೇಶ: ಎಂ.ಜಿ. ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 28 ಮೇ 2025, 18:52 IST
Last Updated 28 ಮೇ 2025, 18:52 IST
   

ಬೆಂಗಳೂರು: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಸಮಾವೇಶವನ್ನು ಮೇ 30ರಿಂದ ಜೂನ್‌1ರವರೆಗೆ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) ಅಧ್ಯಕ್ಷ ಎಂ.ಜಿ. ಬಾಲಕೃಷ್ಣ
ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಫ್‌ಕೆಸಿಸಿಐ, ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಹಾಗೂ ಪೀಣ್ಯ ಕೈಗಾರಿಕಾ ಸಂಘದ ಸಹಯೋಗದಲ್ಲಿ ಸಮಾವೇಶ ನಡೆಯಲಿದೆ. ಎಂಎಸ್ಎಂಇಗಳಿಗೆ ಸಾರ್ವಜನಿಕ ವಲಯ ಘಟಕಗಳು ಹಾಗೂ ದೊಡ್ಡ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಲು ಈ ಸಮಾವೇಶ ವೇದಿಕೆ ಕಲ್ಪಿಸಲಿದೆ. ಮೇಕ್‌ ಇನ್‌ ಇಂಡಿಯಾ ಅಡಿಯಲ್ಲಿ ಸ್ಥಳೀಯ
ಉತ್ಪನ್ನಗಳನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಕೊಂಡೊಯ್ಯಲು ಇದು ಸಹಾಯಕವಾಗಲಿದೆ’ ಎಂದರು.

‘ಸಮಾವೇಶದಲ್ಲಿ 250ಕ್ಕೂ ಹೆಚ್ಚು ಮಳಿಗೆಗಳು, ಬಿ2ಬಿ ಸಭೆಗಳು, ಕೈಗಾರಿಕಾ ತಜ್ಞರೊಂದಿಗೆ ಸಂವಾದ ಹಾಗೂ ಕಾರ್ಯಾಗಾರಗಳು ನಡೆಯಲಿವೆ. 

ADVERTISEMENT

ಮೇ 30ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಸಚಿವರಾದ ಎಂ.ಬಿ. ಪಾಟೀಲ, ಶರಣಬಸಪ್ಪ ದರ್ಶನಾಪುರ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.