ADVERTISEMENT

ರಾಗಿ, ಜೋಳ, ತೊಗರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ: ಕೆ.ಎನ್. ರಾಜಣ್ಣ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2025, 15:36 IST
Last Updated 28 ಮಾರ್ಚ್ 2025, 15:36 IST
ಕೆ.ಎನ್. ರಾಜಣ್ಣ
ಕೆ.ಎನ್. ರಾಜಣ್ಣ   

ಬೆಂಗಳೂರು: ‘ರಾಗಿ, ಜೋಳ, ತೊಗರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ತೀರ್ಮಾನಿಸಲಾಗಿದೆ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸುವ ಸಂಬಂಧ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದರು.

‘ತೊಗರಿಗೆ ಕೇಂದ್ರ ಸರ್ಕಾರ ₹7,550 ಬೆಂಬಲ ಬೆಲೆ ನಿಗದಿ ಮಾಡಿದೆ. ಅದಕ್ಕೆ ₹450 ಹೆಚ್ಚುವರಿ ಕೊಟ್ಟು ರಾಜ್ಯ ಸರ್ಕಾರ ಖರೀದಿಸುತ್ತಿದೆ. ರಾಗಿ ಖರೀದಿಯನ್ನು 20 ಕ್ವಿಂಟಲ್‌ನಿಂದ 30 ಕ್ವಿಂಟಲ್‌ಗೆ ಹೆಚ್ಚಿಸಲಾಗಿದೆ’ ಎಂದರು.

ADVERTISEMENT

ಸಚಿವರಾದ ಎನ್. ಚಲುವರಾಯಸ್ವಾಮಿ, ಶಿವಾನಂದ ಪಾಟೀಲ, ಕೆ.ಎಚ್‌. ಮುನಿಯಪ್ಪ, ಕೃಷಿ ಇಲಾಖೆ ಕಾರ್ಯದರ್ಶಿ ಡಾ. ರವಿಶಂಕರ್, ಕೃಷಿ ಆಯುಕ್ತ‌ ವೈ.ಎಸ್. ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.