ADVERTISEMENT

ಸಿದ್ದರಾಮಯ್ಯಗೆ ಮತ್ತೆ ಸಿಎಂ ಆಗಲು ಜನರ ಆಶೀರ್ವಾದ ಸಿಗಬೇಕಲ್ಲ: ಎಂಟಿಬಿ ನಾಗರಾಜ್‌

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 19:44 IST
Last Updated 26 ಜುಲೈ 2022, 19:44 IST
ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌
ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌   

ಬೆಂಗಳೂರು: ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಲು ಬಯಸಿರಬಹುದು. ಆದರೆ ಅವರಿಗೆ ಜನರ ಆಶೀರ್ವಾದ ಸಿಗಬೇಕಲ್ಲ’ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್‌ ಹೇಳಿದ್ದಾರೆ.

‘ಸಿದ್ದರಾಮಯ್ಯ ಆಸೆ ಪಡು ವುದು ತಪ್ಪಲ್ಲ. ಅವರಿಗೆ ಜನಾದೇಶ ಸಿಗುತ್ತದೆಯೋ ಇಲ್ಲವೋ ಎಂಬುದು 2023 ಚುನಾವಣೆ ನಂತರ ಗೊತ್ತಾಗುತ್ತದೆ.ದಾವಣ ಗೆರೆಯಲ್ಲಿ ‘ಸಿದ್ದರಾಮೋತ್ಸವ’ ಆಯೋಜಿಸಿದ್ದಾರೆ. ಇದರಿಂದ ಬಿಜೆಪಿಗೆ ಯಾವುದೇ ಆತಂಕವಿಲ್ಲ. ಕಾಂಗ್ರೆಸ್‌ನವರು ಕಾರ್ಯಕ್ರಮ ಆಯೋಜಿಸಿದ್ದಾರೆ. ನಮ್ಮ ಪಕ್ಷದ ಕಾರ್ಯಕ್ರಮ ನಾವು ಆಯೋಜನೆ ಮಾಡುತ್ತಿದ್ದೇವೆ’ ಎಂದು ಸುದ್ದಿಗಾರ ರಿಗೆ ಮಂಗಳವಾರ ತಿಳಿಸಿದರು.

ಮುಂದಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಬಿಜೆಪಿಯ ಮುಂದಿನ ನಡೆಯನ್ನು ದೊಡ್ಡ
ಬಳ್ಳಾಪುರದಲ್ಲಿ ಇದೇ 28 ರಂದು ನಡೆಯುವ ಜನೋತ್ಸವ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹಿರಂಗಪಡಿಸಲಿದ್ದಾರೆ ಎಂದರು.

ADVERTISEMENT

ಈ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ರಾಜ್ಯದ ಜನತೆಗೆ ವಿವರಿಸಲಾಗುವುದು. ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರದ ಸಾಧನೆಗಳನ್ನು ಅಂದು ಫಲಾನುಭವಿಗಳೇ ಹೇಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.