ಇ.ಡಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಹಂಚಿಕೆ ಮಾಡಿರುವ ಮುಡಾ ನಿವೇಶನದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇ.ಡಿ) 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಈ ಬಗ್ಗೆ ಜಾರಿ ನಿರ್ದೇಶನಾಲಯವು ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.
ಮುಟ್ಟುಗೋಲು ಹಾಕಿಕೊಂಡ ಆಸ್ತಿಯ ಒಟ್ಟು ಮೌಲ್ಯ ಅಂದಾಜು ₹300 ಕೋಟಿ ಎಂದು ಇ.ಡಿ ಹೇಳಿದೆ. ಇದರಲ್ಲಿ ವಿವಿಧ ರಿಯಲ್ ಎಸ್ಟೇಟ್ ಉದ್ಯಮಿ, ಏಜೆಂಟ್‌ಗಳಿಗೆ ಸೇರಿದ ಆಸ್ತಿಗಳಿವೆ. ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ ಜಪ್ತಿ ಹಾಕಿಕೊಳ್ಳಲಾಗಿದೆ ಎಂದು ಇ.ಡಿ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ಮೇಲೆ ಮುಡಾ ಅವ್ಯವಹಾರ ಪ್ರಕರಣ ಸಂಬಂಧ ಇ.ಡಿ ದೂರು ದಾಖಲಿಸಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.