ಹೈಕೋರ್ಟ್ ಧಾರವಾಡ ಪೀಠ
ಧಾರವಾಡ: ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹ ಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ಧಾರವಾಡ ಪೀಠವು ತೀರ್ಪು ಕಾಯ್ದಿರಿಸಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಿಚಾರಣೆ ನಡೆಸಿದರು.
ಸ್ನೇಹಮಯಿ ಕೃಷ್ಣ ಪರವಾಗಿ ಮಣಿಂಧರ್ ಸಿಂಗ್ ವಾದ ಮಂಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.