ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ಖಚಿತಪಡಿಸಿವೆ.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ರಾಯಚೂರು ಲೋಕಸಭಾ ಕ್ಷೇತ್ರದ ಸದಸ್ಯ ಜಿ.ಕುಮಾರ ನಾಯಕ, 'ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಮುಖ್ಯಮಂತ್ರಿಗಳ ವಿರುದ್ಧ ಕ್ಷುಲ್ಲಕ ದೂರುಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಕರ್ನಾಟಕದ ರಾಜ್ಯಪಾಲರ ಕಚೇರಿ ತೋರುತ್ತಿರುವ ಧಾವಂತವು ಅನಪೇಕ್ಷಿತ ಮತ್ತು ಖಂಡನಾರ್ಹ' ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರವನ್ನು ದುರ್ಬಲಗೊಳಿಸಲು ರಾಜ್ಯಪಾಲರ ಸಾಂವಿಧಾನಿಕ ಅಧಿಕಾರವನ್ನು ಬಿಜೆಪಿ ದುರುಪಯೋಗ ಮಾಡುತ್ತಿದೆಯೇ?' ಎಂದು ಅವರು ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್. ಕೆ. ಅತೀಕ್ ಅವರಿಗೆ ರಾಜ್ಯಪಾಲರು ರವಾನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.