ADVERTISEMENT

MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮಾಹಿತಿ ಕೇಳಿದ ಇ.ಡಿ.?

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 23:30 IST
Last Updated 8 ಅಕ್ಟೋಬರ್ 2024, 23:30 IST
<div class="paragraphs"><p>ಸಿದ್ದರಾಮಯ್ಯ </p></div>

ಸಿದ್ದರಾಮಯ್ಯ

   

–ಪ್ರಜಾವಾಣಿ ಚಿತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರಿಗೆ ಸಂಬಂಧಿಸಿ ಅಗತ್ಯ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯವು ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎನ್ನಲಾಗಿದೆ.

ADVERTISEMENT

‘ಇ.ಡಿ. ಬೆಂಗಳೂರು ಕಚೇರಿಯಿಂದ ಮುಡಾ ಕಚೇರಿಗೆ ಪತ್ರ ರವಾನೆಯಾಗಿದ್ದು, ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ದಾಖಲಾದ ಎಫ್‌ಐರ್‌ಗೆ ಸಂಬಂಧಿಸಿ ಎಲ್ಲ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಒದಗಿಸುವಂತೆ ಕೇಳಿದೆ’ ಎಂದು ಮೂಲಗಳು ತಿಳಿಸಿವೆ. ಆದರೆ ಮುಡಾ ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ.

ಮುಡಾ ವ್ಯಾಪ್ತಿಯಲ್ಲಿ ‘ಸೆಟ್ಲ್‌ಮೆಂಟ್ ಡೀಡ್‌’ ಹೆಸರಿನಲ್ಲಿ ನಡೆದಿರುವ ನಿವೇಶನಗಳ ಹಂಚಿಕೆ ಮತ್ತು ನೋಂದಣಿ ಬಗ್ಗೆಯೂ ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಕೆಯಾಗಿದ್ದು, ಈ ಪ್ರಕರಣವನ್ನೂ ಇ.ಡಿ. ಅಧಿಕಾರಿಗಳು ಪ್ರತ್ಯೇಕವಾಗಿ ಪರಿಶೀಲಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.