ADVERTISEMENT

ಮುಡಾ ಹಗರಣ | ಪಾದಯಾತ್ರೆ ಪರಿಣಾಮ: ಪ್ರಯಾಣಿಕರು ಹೈರಾಣ

ಮೈಸೂರು ರಸ್ತೆಯಲ್ಲಿ ಉಂಟಾದ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಸವಾರರ ಪರದಾಟ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 16:22 IST
Last Updated 3 ಆಗಸ್ಟ್ 2024, 16:22 IST
ಮೈಸೂರು ರಸ್ತೆಯ ನೈಸ್ ರಸ್ತೆ ಜಂಕ್ಷನ್ ಬಳಿ ಸಾಲುಗಟ್ಟಿ ನಿಂತಿದ್ದ ವಾಹನಗಳು. –ಪ್ರಜಾವಾಣಿ ಚಿತ್ರ/ರಂಜು ಪಿ.
ಮೈಸೂರು ರಸ್ತೆಯ ನೈಸ್ ರಸ್ತೆ ಜಂಕ್ಷನ್ ಬಳಿ ಸಾಲುಗಟ್ಟಿ ನಿಂತಿದ್ದ ವಾಹನಗಳು. –ಪ್ರಜಾವಾಣಿ ಚಿತ್ರ/ರಂಜು ಪಿ.   

ಬೆಂಗಳೂರು: ಮುಡಾ ನಿವೇಶನ ಹಗರಣ ಖಂಡಿಸಿ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್‌ ಜಂಟಿಯಾಗಿ ಆರಂಭಿಸಿದ ಪಾದಯಾತ್ರೆ ಪರಿಣಾಮ ಮೈಸೂರು ರಸ್ತೆಯಲ್ಲಿ ಶನಿವಾರ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಹಾಗೂ ಚಾಲಕರು ಹೈರಾಣಾದರು.

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚಾರ ದಟ್ಟಣೆಯಿಂದ ಸಮಸ್ಯೆ ಉಂಟಾಗಿತ್ತು. ನಗರದ ವಿವಿಧ ಜಂಕ್ಷನ್‌ಗಳಲ್ಲಿ ವಾಹನ ಸವಾರರು ಕಾದುಕಾದು ಬಸವಳಿದರು.

ಕೆಂಗೇರಿಯ ನೈಸ್‌ ರಸ್ತೆಯ ಕೆಂಪಮ್ಮ ದೇವಸ್ಥಾನ ಬಳಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರು ರಸ್ತೆಯ ಮೂಲಕವೇ ಕಾರು, ಬಸ್‌ಗಳಲ್ಲಿ ಕಾರ್ಯಕರ್ತರು ದೇವಸ್ಥಾನದ ಬಳಿಗೆ ತೆರಳಿದರು. ಇದರಿಂದ ಮೈಸೂರು ರಸ್ತೆಯ ಹಲವು ಜಂಕ್ಷನ್‌ಗಳಲ್ಲಿ ದಟ್ಟಣೆ ಉಂಟಾಗಿತ್ತು.

ADVERTISEMENT

ಜ್ಞಾನಭಾರತಿ ಜಂಕ್ಷನ್‌, ಆರ್‌.ವಿ.ಕಾಲೇಜು ಬಳಿ, ಕೆಂಗೇರಿ, ನೈಸ್‌ ರೋಡ್‌ ಜಂಕ್ಷನ್‌, ಹೆಜ್ಜಾಲ ಹಾಗೂ ಎಕ್ಸ್‌ಪ್ರೆಸ್‌ ವೇನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೆಲವು ಜಂಕ್ಷನ್‌ಗಳಲ್ಲಿ ಆಂಬುಲೆನ್ಸ್‌ಗಳು ಸಿಲುಕಿ ರೋಗಿಗಳು ಪರದಾಡಿದರು. 

ಇನ್ನು, ಮೈಸೂರಿನತ್ತ ಹೊರಟಿದ್ದವರೂ ದಟ್ಟಣೆಯಲ್ಲಿ ಸಿಲುಕಿ ಪರದಾಡಿದರು.

ಮೈಸೂರು ರಸ್ತೆಯ ನೈಸ್ ರಸ್ತೆ ಜಂಕ್ಷನ್ ಬಳಿ ಸಾಲುಗಟ್ಟಿ ನಿಂತಿದ್ದ ವಾಹನಗಳು. –ಪ್ರಜಾವಾಣಿ ಚಿತ್ರ/ರಂಜು ಪಿ.
ಮೈಸೂರು ರಸ್ತೆಯ ನೈಸ್ ರಸ್ತೆ ಜಂಕ್ಷನ್ ಬಳಿ ಸಾಲುಗಟ್ಟಿ ನಿಂತಿದ್ದ ವಾಹನಗಳು. –ಪ್ರಜಾವಾಣಿ ಚಿತ್ರ/ರಂಜು ಪಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.