ಮುಖ್ಯಮಂತ್ರಿ ಸಿದ್ದರಾಮಯ್ಯ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಪರಾಧ ಪ್ರಕರಣ ದಾಖಲಿಸಲು ಕೋರಿ ರಾಜ್ಯಪಾಲರಿಗೆ ಮೂವರು ಮನವಿಗಳನ್ನು ಸಲ್ಲಿಸಿದ್ದರು.
ಮುಡಾಗೆ ಸೇರಿದ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಜತೆಗೆ ಮುಡಾ ಹೆಸರಿನಲ್ಲಿ ಇದ್ದು, ಅಭಿವೃದ್ಧಿಪಡಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದ್ದ ಜಮೀನನ್ನು ಸಿದ್ದರಾಮಯ್ಯ ಅವರ ಬಾಮೈದ ಅಕ್ರಮವಾಗಿ ಖರೀದಿ ಮಾಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ತನ್ನ ಪ್ರಭಾವ ಬಳಸಿದ್ದಾರೆ ಎಂಬುದು ಟಿ.ಜೆ.ಅಬ್ರಹಾಂ ಅವರ ಆರೋಪ.
ಜತೆಗೆ, ಈಗಾಗಲೇ ಪರಿವರ್ತನೆಯಾದ ಜಮೀನನ್ನು ಮತ್ತೆ ಅಕ್ರಮವಾಗಿ ಪರಿವರ್ತನೆ ಮಾಡಿಕೊಳ್ಳಲಾಗಿದೆ. ಸಿದ್ದರಾಮಯ್ಯ ಅವರ ಪತ್ನಿ ಹೆಸರಿಗೆ ಮಾಲೀಕತ್ವ ವರ್ಗಾವಣೆ ಮಾಡಲಾಗಿದೆ. ಮುಡಾದ ದಿಕ್ಕು ತಪ್ಪಿಸಿ, ದುಬಾರಿ ಬೆಲೆಯ ಬದಲಿ ನಿವೇಶನಗಳನ್ನು ಮಂಜೂರು ಮಾಡಿಸಿಕೊಳ್ಳಲಾಗಿದೆ. ಈ ಎಲ್ಲಾ ಕೃತ್ಯಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ದೂರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.