ADVERTISEMENT

ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 15:45 IST
Last Updated 16 ಜುಲೈ 2024, 15:45 IST
<div class="paragraphs"><p>ಶೋಭಾ ಆಗ್ರಹ</p></div>

ಶೋಭಾ ಆಗ್ರಹ

   

ನವದೆಹಲಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದರು. 

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಗರಣದ ಬಗ್ಗೆ ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಸಿದ್ದರಾಮಯ್ಯ ತಮ್ಮ ಸ್ಥಾನ ತ್ಯಜಿಸಬೇಕು’ ಎಂದರು. 

ADVERTISEMENT

ಸಿದ್ದರಾಮಯ್ಯ ಅವರು ವಾಲ್ಮೀಕಿ ನಿಗಮ ಮಾತ್ರವಲ್ಲದೆ ಎಲ್ಲ ನಿಗಮಗಳಿಂದ ಹಣ ಪಡೆದಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು. ಕಾಂಗ್ರೆಸ್ ಮತ್ತು ಅದರ ಹೈಕಮಾಂಡ್‌ಗೆ ಕರ್ನಾಟಕ ಎಟಿಎಂ ಆಗಿ ಮಾರ್ಪಟ್ಟಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.