ADVERTISEMENT

ಡಾ. ಚಿಂತಾಮಣಿ ಕೊಡ್ಲೆಕೆರೆಗೆ ‘ಮುದ್ದಣ ಕಾವ್ಯ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2020, 19:38 IST
Last Updated 28 ಡಿಸೆಂಬರ್ 2020, 19:38 IST
ಡಾ. ಚಿಂತಾಮಣಿ ಕೊಡ್ಲೆಕೆರೆ
ಡಾ. ಚಿಂತಾಮಣಿ ಕೊಡ್ಲೆಕೆರೆ   

ಮೂಡುಬಿದಿರೆ: ಕಾಂತಾವರ ಕನ್ನಡ ಸಂಘದ 2020ರ ಸಾಲಿನ ‘ಮುದ್ದಣ ಕಾವ್ಯ’ ಪ್ರಶಸ್ತಿಗೆ ಬೆಂಗಳೂರಿನ ಡಾ. ಚಿಂತಾಮಣಿ ಕೊಡ್ಲೆಕೆರೆ ಅವರ ‘ಮೈಮರೆತು ಕುಣಿವೆ’ ಕವನಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ.

ಪ್ರಶಸ್ತಿ ₹ 10 ಸಾವಿರ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ 2021ರ ಜನವರಿ 24ರ ಮುದ್ದಣ ಜಯಂತಿಯಂದು ಕಾಂತಾವರದ ಕನ್ನಡಭವನದಲ್ಲಿ ನಡೆಯಲಿದೆ. ಪ್ರಶಸ್ತಿಗೆ ಪುನರೂರು ವಾಸುದೇವರಾವ್ ಟ್ರಸ್ಟ್‌ ಪ್ರಾಯೋಜಕತ್ವ ಇದೆ ಎಂದು ಕನ್ನಡ ಸಂಘದ ಸ್ಥಾಪಕಾಧ್ಯಕ್ಷ ಡಾ.ನಾ.ಮೊಗಸಾಲೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT