ADVERTISEMENT

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ‘ಮುಖ್ಯಮಂತ್ರಿ’ ಚಂದ್ರು ನೇಮಕ

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 20:36 IST
Last Updated 12 ಜುಲೈ 2023, 20:36 IST
‘ಮುಖ್ಯಮಂತ್ರಿ’ ಚಂದ್ರು
‘ಮುಖ್ಯಮಂತ್ರಿ’ ಚಂದ್ರು   

ಬೆಂಗಳೂರು: ‘ಮುಖ್ಯಮಂತ್ರಿ’ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ(ಎಎಪಿ) ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಚಂದ್ರು ಅವರು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು. 

ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ಅವರನ್ನು ನೇಮಿಸಿ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ.

ADVERTISEMENT

ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಪೃಥ್ವಿರೆಡ್ಡಿ ಅವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.