ಮುಂಬೈ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್, ಜೆಡಿಸ್ ಮುಖಂಡರು ಮುಂಬೈನ ಸೋಫಿಯಾನ್ ಹೋಟೆಲ್ ನಲ್ಲಿ ತಂಗಿದ್ದಾರೆ. ಅಲ್ಲಿಂದಲೇ ತಮ್ಮ ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಮುಂಬೈ ಹೋಟೆಲ್ ನಲ್ಲಿ ತಂಗಿರುವುದಾಗಿ ಬಿ.ಸಿ.ಪಾಟೀಲ್ ಹಾಗೂ ಮಸ್ಕಿ ಶಾಸಕಪ್ರತಾಪಗೌಡ ಪಾಟೀಲ ಹೇಳಿದ್ದಾರೆ.
ನಾವು ರಾಜೀನಾಮೆ ನೀಡಿದ್ದು, ಮುಂದೆ ಬಿಜೆಪಿ ಸೇರುತ್ತೇವೆ ಎಂದು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಸ್ಪಷ್ಟಪಡಿಸಿದ್ದಾರೆ.
ಸದ್ಯಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.