ADVERTISEMENT

ಮುರುಘಾ ಶರಣರ ಅರ್ಜಿ ವಿಚಾರಣೆ ಏ.6ಕ್ಕೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 23:04 IST
Last Updated 23 ಮಾರ್ಚ್ 2023, 23:04 IST
   

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿದ ಮತ್ತು ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಪ್ರಶ್ನಿಸಲಾದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್‌ 6ಕ್ಕೆ ಮುಂದೂಡಿದೆ.

ಈ ಸಂಬಂಧದ ಎರಡು ಪ್ರತ್ಯೇಕ ರಿಟ್‌ ಅರ್ಜಿಗಳು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ
ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆ ನಿಗದಿಯಾಗಿದ್ದವು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್.ಹಿರೇಮಠ ಅವರು, ‘ಪ್ರಕರಣದಲ್ಲಿ ವಾದ ಮಂಡಿಸಬೇಕಿರುವ ಹಿರಿಯ ವಕೀಲ ಸಿ.ವಿ.ನಾಗೇಶ್‌ ಗೈರಾಗಿರುವ ಕಾರಣ ವಿಚಾರಣೆ ಮುಂದೂಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್‌ 6ಕ್ಕೆ ನಿಗದಿಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT