ADVERTISEMENT

ಮುರುಘಾ ಶ್ರೀ ಬಂಧನ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲ: ಸಚಿವ ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 9:56 IST
Last Updated 1 ಸೆಪ್ಟೆಂಬರ್ 2022, 9:56 IST
 ಸಚಿವ ವಿ.ಸೋಮಣ್ಣ
ಸಚಿವ ವಿ.ಸೋಮಣ್ಣ   

ಚಾಮರಾಜನಗರ: ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಶ್ರೀಗಳ ಬಂಧನ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಕೊಳ್ಳೇಗಾಲದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಏನಾಗಿದೆ ಎಂಬುದರ ಕುರಿತು ಮಾಹಿತಿ ಇದೆ. ಈ ರೀತಿಯ ಪ್ರಕರಣ ನಡೆದಿರುವುದು ದುರಂತ. ಪ್ರಕರಣದ ಸತ್ಯಾಸತ್ಯತೆ ಹೊರಬರಲು ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ' ಎಂದರು.

'ಈಗಾಗಲೇ ನ್ಯಾಯಾಲಯದಲ್ಲಿ ಬಾಲಕಿಯರ ಹೇಳಿಕೆ ನೀಡಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ನಾನು ನೀವು ಈ ಬಗ್ಗೆ ಮಾತನಾಡುವುದು ಸರಿ ಅಲ್ಲ. ಕಾನೂನು ಎಲ್ಲರಿಗೂ ಒಂದೇ. ಅದಕ್ಕೆ ತಲೆ ಬಾಗೋಣ. ಸಮಾಜದಲ್ಲಿ ಎಲ್ಲವೂ ಸರಿ ಇದೆ ಅಥವಾ ಸರಿ ಇಲ್ಲ ಎಂದು ಹೇಳುವಷ್ಟು ನೀಚ ನಾನಲ್ಲ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.