ADVERTISEMENT

ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2023, 15:57 IST
Last Updated 31 ಅಕ್ಟೋಬರ್ 2023, 15:57 IST
ಹೈಕೋರ್ಟ್‌
ಹೈಕೋರ್ಟ್‌    

ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಮುಕ್ತಾಯಗೊಳಿಸಿರುವ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರವೂ ಮುಂದುವರಿಸಿತು.

ವಿಚಾರಣೆ ವೇಳೆ ಒಡನಾಡಿ ಸೇವಾ ಸಂಸ್ಥೆ ಪರ ವಕೀಲ ಡಿ.ಸಿ.ಶ್ರೀನಿವಾಸ್‌ ವಾದ ಮಂಡಿಸಿ, ’ಆರೋಪಿ ಶರಣರು ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ನೀಡಿದರೆ ಸಂತ್ರಸ್ತ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಮಕ್ಕಳನ್ನು ಲೈಂಗಿಕವಾಗಿ ಶೋಷಿಸಿರುವ ಶರಣರ ನಡೆ ಮ್ಯಾಜಿಸ್ಟ್ರೇಟರ ಮುಂದೆ ಬಾಲಕಿಯರು ನೀಡಿರುವ ಹೇಳಿಕೆಯಲ್ಲಿ ಸಂಪೂರ್ಣ ಬಿಂಬಿತವಾಗಿದೆ. ನ್ಯಾಯಪೀಠ ಇದನ್ನು ಗಂಭೀರವಾಗಿ ಪರಿಗಣಿಸಬೇಕು‘ ಎಂದು ಕೋರಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ನವೆಂಬರ್‌ 8ರಂದು ಆದೇಶ ಪ್ರಕಟಿಸುವ ಸಂಭಾವ್ಯ ದಿನಾಂಕವನ್ನು ಪ್ರಕಟಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.