ADVERTISEMENT

ಉಪಚುನಾವಣೆ ಗೆಲ್ಲಲೇ ಬೇಕು: ಸಿ.ಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 21:12 IST
Last Updated 22 ಅಕ್ಟೋಬರ್ 2020, 21:12 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಶಿರಾ ಮತ್ತು ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳನ್ನು ಗೆಲ್ಲಲೇಬೇಕು. ಇದಕ್ಕಾಗಿ ಎಲ್ಲ ಸಚಿವರೂ ಶ್ರಮವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಅವರು ಅಧಿಕಾರಿಗಳನ್ನು ಹೊರಗೆ ಕಳುಹಿಸಿ, ಅನೌಪಚಾರಿಕವಾಗಿ ಕ್ಷೇತ್ರಗಳಲ್ಲಿ ಪಕ್ಷದ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು ಎಂದು ಮೂಲಗಳು ತಿಳಿಸಿವೆ.

ಗುಪ್ತದಳದ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಅನುಕೂಲಕರ ಸ್ಥಿತಿ ಇದೆ. ಹಾಗೆಂದು ಗೆದ್ದೇ ಗೆಲ್ಲುತ್ತೇವೆ ಎಂಬ ಅತಿಯಾದ ವಿಶ್ವಾಸ ಬಿಟ್ಟು, ಹೆಚ್ಚು ವಾಸ್ತವಿಕ ದೃಷ್ಟಿಯಿಂದ ಚುನಾವಣಾ ಕಾರ್ಯತಂತ್ರಗಳನ್ನು ಅನುಸರಿಸಬೇಕು. ಅತ್ಯಂತ ಸಂಕಷ್ಟ ಕಾಲದಲ್ಲೂ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸಿರುವುದನ್ನು ಜನರ ಗಮನಕ್ಕೆ ತರಬೇಕು. ಎಲ್ಲ ಜಾತಿ ಮತ್ತು ಸಮುದಾಯಗಳ ವಿಶ್ವಾಸ ಗಳಿಸುವ ಮೂಲಕ ಅಭ್ಯರ್ಥಿಗಳನ್ನು ಗೆಲುವಿನ ದಡ ಮುಟ್ಟಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.