ADVERTISEMENT

ಮುಜರಾಯಿ ದೇಗುಲಗಳ ಆಡಳಿತ ಮಂಡಳಿ ರದ್ದು: ಮುಖ್ಯಮಂತ್ರಿ ಆದೇಶ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 6:33 IST
Last Updated 27 ಸೆಪ್ಟೆಂಬರ್ 2019, 6:33 IST
ಘಾಟಿ ಸುಬ್ರಹ್ಮಣ್ಯ ದೇಗುಲದ ವಿಹಂಗಮ ನೋಟ (ಪ್ರಾತಿನಿಧಿಕ ಚಿತ್ರ)
ಘಾಟಿ ಸುಬ್ರಹ್ಮಣ್ಯ ದೇಗುಲದ ವಿಹಂಗಮ ನೋಟ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ರಾಜ್ಯದ ಎಲ್ಲಾ‌ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಧರ್ಮದರ್ಶಿ ವ್ಯವಸ್ಥಾಪನಾ ಸಮಿತಿಗಳನ್ನು ರದ್ದುಪಡಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕ ಮಾಡಲಾದ ಎಲ್ಲ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಸದಸ್ಯರ ನಾಮನಿರ್ದೇಶನ ಮತ್ತು ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ದೇಗುಲಗಳ ಆಡಳಿತವನ್ನು ಸಂಬಂಧಿಸಿದ ಜಿಲ್ಲಾಧಿಕಾರಿಗಳು ಕೂಡಲೇ ವಹಿಸಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ADVERTISEMENT

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಜಿ.ರಶ್ಮಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿ.ರಶ್ಮಿ ಅವರನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಆದೇಶದ ಪ್ರತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.