ರಾಮನಗರ: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯ ಭಾಗಶಃ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಮಂಡ್ಯ ಜಿಲ್ಲೆಯ ನಿಡಘಟ್ಟದಿಂದ ಬೆಂಗಳೂರಿನ ಕ್ರೈಸ್ಟ್ ಕಾಲೇಜುವರೆಗೆ ಸುಮಾರು 51 ಕಿ.ಮೀ. ಉದ್ದದ ಹೆದ್ದಾರಿ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದೆ. ಇದನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸೋಮವಾರದಿಂದ ಸಾರ್ವಜನಿಕರ ಓಡಾಟಕ್ಕೆ ಮುಕ್ತಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಯೋಜಿಸಿತ್ತು. ಆದರೆ, ದೆಹಲಿಯಿಂದ ರಸ್ತೆ ಸುರಕ್ಷತೆ ವಿಭಾಗದ ಅಧಿಕಾರಿಗಳ ತಂಡವು ಪರಿಶೀಲನೆ ನಡೆಸಿ ಹಸಿರು ನಿಶಾನೆ ತೋರಿಲ್ಲ. ಈ ಹಿನ್ನೆಲೆಯಲ್ಲಿ ವಿಳಂಬ ಆಗಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಹೊಸ ದಾರಿಯಲ್ಲಿ ನಿಡಘಟ್ಟದಿಂದ ಕ್ರೈಸ್ಟ್ ಕಾಲೇಜುವರೆಗೆ ಸಂಚಾರ ಕೈಗೊಂಡು ಕಾಮಗಾರಿ ಪರಿಶೀಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.