ADVERTISEMENT

ಆಸ್ಪತ್ರೆಯಿಂದ ಮನೆಗೆ ತನ್ವೀರ್‌ಸೇಠ್‌

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2019, 17:05 IST
Last Updated 25 ನವೆಂಬರ್ 2019, 17:05 IST
   

ಮೈಸೂರು: ಹಲ್ಲೆಗೆ ಒಳಗಾಗಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ತನ್ವೀರ್‌ಸೇಠ್‌ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಮುಖ್ಯಸ್ಥ ಡಾ.ಉಪೇಂದ್ರ ಶೆಣೈ, ‘ಶಾಸಕ ತನ್ವೀರ್‌ಸೇಠ್‌ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಇವರನ್ನು ಸೋಮವಾರ ರಾತ್ರಿ 9.30ಕ್ಕೆ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಸದ್ಯ, ತನ್ವೀರ್‌ಸೇಠ್‌ ಅವರು ಬೆಂಗಳೂರಿನ ತಮ್ಮ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.