
ಪ್ರಜಾವಾಣಿ ವಾರ್ತೆ
ಮೈಸೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಇದೇ ವೇಳೆ ಕುಮಾರಸ್ವಾಮಿ ಪತ್ನಿ ಅನಿತಾ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಜಿ.ಟಿ.ದೇವೇಗೌಡ, ಸಾರಾ ಮಹೇಶ್ ಸಾಥ್ ನೀಡಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿಚನ್ನಮ್ಮ ಸೇರಿದಂತೆ ಕುಟುಂಬ ಸದಸ್ಯರು ಎರಡು ಐರಾವತ ಬಸ್‌ಗಳಲ್ಲಿ ಬಂದರು.
ಜಂಬೂಸವಾರಿಗೆಕ್ಷಣಗಣನೆ ಆರಂಭವಾಗಿದೆ.
*
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.