ADVERTISEMENT

ಸೆ. 29ರಂದು ದಸರೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2019, 20:15 IST
Last Updated 24 ಆಗಸ್ಟ್ 2019, 20:15 IST
ದಸರಾ ಲಾಂಛನ
ದಸರಾ ಲಾಂಛನ   

ಮೈಸೂರು: ದಸರಾ ಮಹೋತ್ಸವ ಸೆ.29ರಂದು ಉದ್ಘಾಟನೆಯಾಗಲಿದೆ. ಚಾಮುಂಡಿಬೆಟ್ಟದಲ್ಲಿ,ಅಂದು ಬೆಳಿಗ್ಗೆ 9.30ರಿಂದ 10.20ರ ವರೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಉತ್ಸವಕ್ಕೆ ಚಾಲನೆ ಸಿಗಲಿದೆ.

ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ, ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ನಾಡಹಬ್ಬ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.

ವಿಜಯದಶಮಿ ದಿನವಾದ ಅ. 8ರಂದು ಮಧ್ಯಾಹ್ನ 2.15ರಿಂದ 2.58ರೊಳಗೆ ಸಲ್ಲುವ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಲಿದೆ. ಸಂಜೆ 4.31ರಿಂದ 4.57ರೊಳಗೆ ಸಲ್ಲುವ ಕುಂಭ ಲಗ್ನದಲ್ಲಿ ಅರಮನೆ ಆವರಣದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಜಂಬೂಸವಾರಿಗೆ ಚಾಲನೆ ನೀಡಲಾಗುತ್ತದೆ.

ADVERTISEMENT

ಸಂಜೆ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.