ADVERTISEMENT

ಮೈಸೂರು ದಸರಾ: ಸಿ.ಎಂಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 2:32 IST
Last Updated 15 ಸೆಪ್ಟೆಂಬರ್ 2019, 2:32 IST
ನಾಡಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಆಹ್ವಾನ ನೀಡಿದರು. ಶಾಸಕರಾದ ಜಿ.ಟಿ.ದೇವೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌.ವಿಶ್ವನಾಥ್‌ ಅವರೂ ಇದ್ದರು.
ನಾಡಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಆಹ್ವಾನ ನೀಡಿದರು. ಶಾಸಕರಾದ ಜಿ.ಟಿ.ದೇವೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌.ವಿಶ್ವನಾಥ್‌ ಅವರೂ ಇದ್ದರು.   

ಬೆಂಗಳೂರು: ಮೈಸೂರು ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ದಸರಾ ಸಮಿತಿಯ ಸದಸ್ಯರ ನಿಯೋಗವು ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿತು.

ನಾಡ ಹಬ್ಬ ಮೈಸೂರು ದಸರಾಕ್ಕೆ ಇದೇ 29 ರಂದು ಬೆಳಿಗ್ಗೆ 9 ಕ್ಕೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತಿದ್ದು, ಅಕ್ಟೋಬರ್‌ 8 ರವರೆಗೆ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ‘ಒಂದು ಕಾರ್ಯಕ್ರಮವನ್ನಷ್ಟೇ ಉದ್ಘಾಟನೆ ಮಾಡುತ್ತೇನೆ. ಉಳಿದ ಕಾರ್ಯಕ್ರಮಗಳಿಗೆ ಉಪಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಆಹ್ವಾನಿಸಿ. ಎಲ್ಲರನ್ನೂ ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಿ’ ಎಂದು ಸಲಹೆ ನೀಡಿದರು.

ADVERTISEMENT

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸೋಮಣ್ಣ, ದಸರಾದಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಕೈಗೊಂಡಿದ್ದೇವೆ’ ಎಂದು ತಿಳಿಸಿದರು.

ಶಾಸಕ ರಾಮದಾಸ್ ಗೈರಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ, ಅವರಿಗೆ ‘ದಸರಾ ಸಮಿತಿಯಲ್ಲಿ ಬೇರೆ ಬೇರೆ ಜವಾಬ್ದಾರಿಗಳು ಇದ್ದುದರಿಂದ ನಮ್ಮ ಜತೆ ಬಂದಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.