ADVERTISEMENT

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ- ಪ್ರವೀಣ್ ಸೂದ್

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2021, 8:08 IST
Last Updated 28 ಆಗಸ್ಟ್ 2021, 8:08 IST
   

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.

ಇವರು‌ ಮೊದಲು ದರೋಡೆಗೆ ಪ್ರಯತ್ನಪಟ್ಟು ನಂತರ ಅತ್ಯಾಚಾರ ಎಸಗಿದ್ದಾರೆ. ಇವರಲ್ಲಿ ಒಬ್ಬ ಬಾಲಕನಾಗಿದ್ದಾನೆ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಆರೋಪಿಗಳ ವಿರುದ್ದ ಬಲವಾದ ಸಾಕ್ಷ್ಯಾಧಾರಗಳು ದೊರೆತಿದ್ದು, ಅವುಗಳನ್ನು ಈಗ ಬಹಿರಂಗಪಡಿಸಲು ಸಾಧ್ಯ ಇಲ್ಲ ಎಂದು ತಿಳಿಸಿದರು.

ADVERTISEMENT

ತನಿಖಾ ತಂಡಕ್ಕೆ ₹5 ಲಕ್ಷ ಬಹುಮಾನ ಘೋಷಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.