ADVERTISEMENT

ಯುವಕ–ಯುವತಿ ರಾತ್ರಿವೇಳೆ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು: ಸಚಿವ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2021, 13:28 IST
Last Updated 26 ಆಗಸ್ಟ್ 2021, 13:28 IST
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ   

ಬೆಂಗಳೂರು: ‘ಮೈಸೂರಿನಲ್ಲಿ ಯುವಕ–ಯುವತಿ ರಾತ್ರಿ 7.30ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಆ ವೇಳೆಗೆ ಅವರು ಅಲ್ಲಿಗೆ ಹೋಗಬಾರದಿತ್ತು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ಅಲ್ಲಿಗೆ ಹೋಗಬಾರದು ಅಂತ ತಡೆಯೋಕೆ ಆಗುವುದಿಲ್ಲ. ಸದ್ಯಕ್ಕೆ ಯುವಕ ಮತ್ತು ಯುವತಿ ಶಾಕ್‌ಗೆ ಒಳಗಾಗಿದ್ದಾರೆ. ಅವರಿಂದ ಸಂಪೂರ್ಣ ಹೇಳಿಕೆ ಪಡೆಯಬೇಕಾಗಿದೆ ಎಂದೂ ಅವರು ಹೇಳಿದರು.

'ಪ್ರಕರಣದ ಬಗ್ಗೆ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಲು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಶೋಧ ಕಾರ್ಯಾಚರಣೆಯಲ್ಲಿ ತಂಡ ಸಕ್ರಿಯವಾಗಿದೆ’ ಎಂದು ಅವರು ಹೇಳಿದರು.

ADVERTISEMENT

‘ಮೈಸೂರಿನಲ್ಲಿ ರೇಪ್‌ ಆಗಿದೆ. ಆದರೆ, ಕಾಂಗ್ರೆಸ್‌ನವರು ನನ್ನನ್ನು ರೇಪ್‌ ಮಾಡ್ತಾ ಇದ್ದಾರೆ’ ಎಂದು ಜ್ಞಾನೇಂದ್ರ ಹೇಳಿಕೆ ನೀಡಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.

‘ರಾಜೀನಾಮೆಗೆ ಒತ್ತಾಯಿಸುವ ಮೂಲಕ ಕಾಂಗ್ರೆಸ್‌ನವರು ನನ್ನ ರೇಪ್‌ ಮಾಡೋ ಪ್ರಯತ್ನ ಮಾಡ್ತಾ ಇದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.